ಬಂಟ್ವಾಳ :ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26 ನೇ ಸಾಲಿನಲ್ಲಿ ಒಟ್ಟು ರೂ. 720.47 ಕೋಟಿ ವ್ಯವಹಾರ ನಡೆಸಿ , ರೂ.2,19,28,344.49 ಕೋಟಿ ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಅವರು ಸೆ. 16ರಂದು ಬೆಳಿಗ್ಗೆ ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸಂಘವು 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಬಿ. ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು , ಸಂಘವು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದ್ದು ,ಆಡಳಿತ ಮಂಡಳಿಯ ನಿರ್ದೇಶಕರ , ಸಿಬ್ಬಂದಿಗಳ ಹಾಗೂ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಎಲ್ಲರಿಗೂ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಬಂದಿದ್ದು,ಕಳೆದ 79 ವರ್ಷಗಳಿಂದ ಕಾರ್ಯಚರಿಸುತ್ತಿದ್ದು, ಅಭಿವೃದ್ದಿಯಲ್ಲಿ ಮುನ್ನಡೆಯುತ್ತಿದೆ .
2025-26 ನೇ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು ರೂ. 133.63 ಕೋಟಿ ಸಾಲ ವಿತರಿಸಲಾಗಿದ್ದು,ಹೊರ ಬಾಕಿ ಸಾಲವು ರೂ.133.63 ಕೋಟಿ ಆಗಿದ್ದು , ವಿತರಿಸಿದ ಸಾಲದಲ್ಲಿ ಶೇ 98% ರಷ್ಟು ವಸೂಲಾತಿಯಾಗಿರುತ್ತದೆ. 2025-26 ನೇ ಸಾಲಿನ ವರ್ಷಾಂತ್ಯಕ್ಕೆ ರೂ. 69.56 ಕೋಟಿ ಠೇವಣಿ ಹೊಂದಿದ್ದು , ನಮ್ಮ ಸಂಘವು ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ “ಎ” ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬರಲಾಗಿದೆ ಎಂದರು.
ಬೆಳೆವಿಮೆ ಯೋಜನೆಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ :
2025-26 ನೇ ಸಾಲಿನಲ್ಲಿ 1885 ರೈತರು 2395.78 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ ರೂ. 62.62 ಲಕ್ಷ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ನಮ್ಮ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 5-6 ಕೋಟಿ ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ . ಇದರಿಂದ ನಮ್ಮ ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ನಮ್ಮ ಸಂಘವು ಒಂದಾಗಿದೆ.
ಪ್ರತಿಭಾ ಪುರಸ್ಕಾರ:
ಸಂಘದ ಸದಸ್ಯರ ಪ್ರತಿಭಾನ್ವಿತ SSLC ಹಾಗೂ PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದವರನ್ನು ಗೌರವಿಸಲಾಗುತ್ತದೆ.
‘ರೈತ ಕಲ್ಯಾಣ ನಿಧಿ” ಯೋಜನೆ:
ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಸದ್ರಿಯವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತ ಕಲ್ಯಾಣ ನಿಧಿ” ಯೋಜನೆಯ ಮೂಲಕ ರೂ.10000/- ದಂತೆ 38 ಮಂದಿಗೆ ಆರ್ಥಿಕವಾಗಿ ಸಹಕಾರ ನೀಡಲಾಗಿದೆ.
ನ್ಯಾಯಬೆಲೆ ಅಂಗಡಿ:
ಹೆಚ್ಚಿನ ಲಾಭವಿಲ್ಲದಿದ್ದರೂ ಸಹ ಪಡಿತರ ವಿತರಣೆ
ಮಾಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗಿದ್ದು,ಸಂಘದಲ್ಲಿ “ನೇತಾಜಿ ಬಹುಪಯೋಗಿ ಸೇವಾಕೇಂದ್ರ”ದ ಹೆಸರಿನಲ್ಲಿ ಗೋದಾಮು ಕಟ್ಟಡ ಇದ್ದು,ಇದರ ಮೂಲಕ ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತ್ತುತ್ತು , ಸುಣ್ಣ, ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ರಿಯಾಯಿತಿ ದರದಲ್ಲಿ ಮೈಲುತ್ತುತ್ತು ಸುಣ್ಣ ನೀಡಲಾಗುತ್ತಿದೆ . ಕಡಿಮೆ ಬಡ್ಡಿದರದಲ್ಲಿ ರಾಸಾಯನಿಕ ಗೊಬ್ಬರ ಖರೀದಿಗೆ ಸಾಲ ನೀಡಲಾಗುತ್ತಿದೆ.
ಶಾಖೆಗಳು:
ಸಿದ್ದಕಟ್ಟೆ ಪ್ರಧಾನ ಕಛೇರಿ ಸೇರಿದಂತೆ,ಸಂಘವು ಆರಂಬೋಡಿ, ರಾಯಿ, ಮಾವಿನಕಟ್ಟೆ,ಅರಳ ಎಂಬಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿದ್ದು , ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ RTGS , NEFT ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ,.
ರೈತ ಸಭಾಂಗಣ :
ಸಾರ್ವಜನಿಕ ಕಾರ್ಯಕ್ರಮಕ್ಕೆ ಅನೂಕೂಲವಾಗುವಂತೆ ಸಂಘದ ಸ್ಥಾಪಕ ಅಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ.
ಈ ಸಲದ ಮಹಾಸಭೆಯಲ್ಲಿ ದೇಶದಲ್ಲಿ ಪಂಚ ಪರಿವರ್ತನೆ ಅನುಷ್ಠಾನದಡಿಯಲ್ಲಿ ಪರಿಸರ ಸಂರಕ್ಷಣೆಗಾಗಿ ಕಲ್ಪನೆಯಡಿಯಲ್ಲಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಹಲಸಿನ ಗಿಡ ನೀಡುವುದರೊಂದಿಗೆ “ಕಾಡುಬೆಳೆಸಿ-ನಾಡು ಉಳಿಸಿ” ಅಭಿಯಾನಕ್ಕೆ ಮಹತ್ವ ನೀಡಲಾಗಿದೆ ಎಂದರು
ಸಂಘದ ಮಹಾಸಭೆ :
2025-26 ನೇ ಸಾಲಿನ ಮಹಾಸಭೆಯು ದಿನಾಂಕ 19-09-2026 ರಂದು ಶನಿವಾರ ಬೆಳಿಗ್ಗೆ 10.00 ಕ್ಕೆ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಲಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ದಿನೇಶ್ ಪೂಜಾರಿ , ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್ , ಎ ಶಿವ ಗೌಡ , ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ಕೀರ್ತಿರಾಜ್, ವೃತ್ತಿಪರ ನಿರ್ದೇಶಕರಾಗಿ ರಾಜೇಶ್ ಶೆಟ್ಟಿ ಕೆ , ನವೀನ್ ಹೆಗ್ಡೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ , ಸಹಾಯಕ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು.













