ತಿರುವನಂತಪುರ: ಶಬರಿಮಲೆಗೆ ಆಗಮಿಸುವ ಯಾತ್ರಾರ್ಥಿಗಳು ಆನ್‌ಲೈನ್ ನೋಂದಣಿ ಮಾಡದೆ ಇದ್ದರೂ ಸುಗಮ ದರ್ಶನದ ವ್ಯವಸ್ಥೆ ಮಾಡಲಾಗುವುದ ಎಂದು ಕೇರಳ ಸರಕಾರ ಮಂಗಳವಾರ ಸ್ಪಷ್ಟಪಡಿಸಿದೆ.
ಆನ್‌ಲೈನ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಈ ಬಾರಿ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂಬ ಕೇರಳ
ಸರಕಾರದ ನಿರ್ಧಾರದ ವಿರುದ್ದ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು. ಹೀಗಾಗಿ ತನ್ನ ನಿರ್ಧಾರದಿಂದ ಸರಕಾರ ಹಿಂದೆ ಸರಿದಿದೆ.















