ಪಕ್ಕಳಪಾದೆ: ಸರಸ್ವತಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ. ವಿಶ್ವಕಪ್ ಚಿನ್ನದ ಪದಕ ವಿಜೇತೆ ಧನಲಕ್ಷ್ಮೀ ಪೂಜಾರಿಗೆ ಸನ್ಮಾನ.

Coastal Bulletin
ಪಕ್ಕಳಪಾದೆ: ಸರಸ್ವತಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ. ವಿಶ್ವಕಪ್ ಚಿನ್ನದ ಪದಕ ವಿಜೇತೆ ಧನಲಕ್ಷ್ಮೀ ಪೂಜಾರಿಗೆ ಸನ್ಮಾನ.

ಬಂಟ್ವಾಳ: ಮೇರಮಜಲು ಗ್ರಾಮದ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಹತ್ತನೇ ವರ್ಷದ ನವರಾತ್ರಿ ಉತ್ಸವಕ್ಕೆ ವಿಶ್ವ ಚಾಂಪಿಯನ್ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ಹತ್ತು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಊರ ಹಾಗೂ ಪರವೂರ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಲಲಿತಾ ಪಂಚಮಿಯ ಶುಭದಿನದಂದು 2025ರ ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಧನಲಕ್ಷ್ಮೀ ಪೂಜಾರಿ ಅವರನ್ನು ಗೌರವ ಸಲಹೆಗಾರರಾದ

ಜೀವಿತ ಪಡು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಬಾಬು ಮಯ್ಯಾಡಿ, ಉತ್ಸವ ಸಮಿತಿಯ ಗೌರವಾಧ್ಯಕ್ಷ ಜಾರಪ್ಪ ಪೂಜಾರಿ, ಅಧ್ಯಕ್ಷ ದಿನೇಶ್ ಪಕ್ಕಳಪಾದೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೀಕ್ಷಿತ್ ಪಕ್ಕಳಪಾದೆ, ಗೌರವಾಧ್ಯಕ್ಷ ವಸಂತ ಬಡ್ಡೂರು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಧನಲಕ್ಷ್ಮೀ ಪೂಜಾರಿ ಅವರ ಉಜ್ವಲ ಭವಿಷ್ಯಕ್ಕಾಗಿ ಸರಸ್ವತಿ ಮಾತೆಯಲ್ಲಿ ಪ್ರಾರ್ಥಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

Leave a Comment