ಬಂಟ್ವಾಳದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆಗ್ರಹಿಸಿ ಸಂಸದರಿಗೆ ಪ್ರಭಾಕರ ಪ್ರಭು  ಮನವಿ

Coastal Bulletin
ಬಂಟ್ವಾಳದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆಗ್ರಹಿಸಿ ಸಂಸದರಿಗೆ ಪ್ರಭಾಕರ ಪ್ರಭು  ಮನವಿ

ಬಂಟ್ವಾಳ: ಬೆಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು–ಮಂಗಳೂರು ಮಾರ್ಗವಾಗಿ ಗೋವಾಕ್ಕೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಕರಾವಳಿ ಭಾಗದ ಪ್ರಯಾಣಿಕರಿಗೆ ಅನುಕೂಲಕರವಾಗಿದೆ. ಆದರೆ, ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದಿರುವುದು ಈ ಭಾಗದ ಜನರಿಗೆ ಅನಾನುಕೂಲ ಉಂಟುಮಾಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ರೈಲ್ವೆ ನಿಲ್ದಾಣವು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುಭಾಗದ ಜನರಿಗೆ ಹಾಗೂ ಪುತ್ತೂರು ತಾಲೂಕಿನ ಕೆಲವು ಭಾಗದ

ಪ್ರಯಾಣಿಕರಿಗೆ ಪ್ರಮುಖ ಕೇಂದ್ರವಾಗಿದೆ. ಇಲ್ಲಿ ರೈಲು ನಿಲುಗಡೆ ಕಲ್ಪಿಸಿದರೆ ಈ ಮೂರು ತಾಲೂಕುಗಳ ಪ್ರಯಾಣಿಕರಿಗೆ ಗೋವಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ವೇಗವಾಗಿ ಹಾಗೂ ಆರಾಮದಾಯಕವಾಗಿ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಂಟ್ವಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಭಾಕರ ಪ್ರಭು ಸಂಸದರನ್ನು ಒತ್ತಾಯಿಸಿದ್ದಾರೆ.

Leave a Comment