ಬೆಂಗಳೂರು:ದೇವಾಲಯಗಳಲ್ಲಿ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ತನ್ನ ಆದೇಶವನ್ನು ಹಿಂಪಡೆದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಸಭೆಗೆ ತಿಳಿಸಿದರು. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು
ಯಾವ ಧಾರ್ಮಿಕ ಕೇಂದ್ರಗಳಲ್ಲಿ ಮುಂಜಾನೆ ಈ ರೀತಿಯ ಶಬ್ದ ಉಂಟಾಗುತ್ತಿತ್ತೋ ಅಂತಹ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ನೋಟಿಸ್ ನೀಡಲಾಗಿತ್ತು ಎಂದರು ಇದು
ಯಾವುದೇ ಒಂದು ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ನೋಟಿಸ್ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನು ಹಿಂಪಡೆಯಲಾಗಿದೆ ಎಂದರು.














