Coastal Bulletin

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ನೀಡಿರುವ ಸಿಎಂ ಬೊಮ್ಮಾಯಿ, ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಜೊತೆಗೆ ಹಲವೆಡೆ ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಚಿಕ್ಕಮಗಳೂರಿನ ಬಹು ದಿನಗಳ ಬೇಡಿಕೆಯಾದ ಪ್ರತ್ಯೇಕ ವಿಶ್ವವಿದ್ಯಾಲಯ ಘೋಷಿಸಿದ ಸಿಎಂ, ತುಮಕೂರಿಗೆ ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಘೋಷಿಸಿದ್ದಾರೆ. ಮೋದಿಯಂತೆ ಸಿಎಂ ಬೊಮ್ಮಾಯಿ ಸಹ ರೈತರ ಸ್ವಾವಲಂಬನೆಗೆ ತಂತ್ರಜ್ಞಾನದ ಮೊರೆ ಹೋಗಿದ್ದು, ಕೃಷಿ ಆಧಾರಿತ ತಂತ್ರಜ್ಞಾನ ಅಭಿವೃದ್ಧಿಗೆ ಅಲ್ಪ ಮಟ್ಟದ ಅನುದಾನ ಮೀಸಲಿಟ್ಟಿದ್ದಾರೆ. ನೀರಾವರಿ ಯೋಜನೆಗಳನ್ನು ಕಡೆಗಣಿಸಿದ ಹಾವೇರಿ ಮೂಲದ ಬೊಮ್ಮಾಯಿ, ಉತ್ತರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲವು ನೀರಾವರಿ ಯೋಜನೆಗಳಿಗೆ ಅಲ್ಪ ಮಟ್ಟದ ಅನುದಾನವನ್ನು ಮೀಸಲಿಟ್ಟಿದ್ದಾರೆ.

ನೀರಾವರಿಗೆ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ.ಅದಲ್ಲದೇ 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲಾಗುವುದು.ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ಸುತ್ತಮುತ್ತ ರಸ್ತೆ ಅಭಿವೃದ್ಧಿ, ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನವನ್ನು ನೀಡಲಾಗಿದೆ.ರಾಜ್ಯದ ಮೀನುಗಾರರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಹಾವೇರಿಯಲ್ಲಿ ಮೀನು ಪಾಲನಾ ಕೇಂದ್ರ ಹಾಗೂ ಬೈಂದೂರಿನಲ್ಲಿ ಸೀಫುಡ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ನೀಡುವುದಾಗಿ ಘೋಷಣೆಯಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023ನೇ ಆರ್ಥಿಕ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ರೈತರಿಗೆ ವಿವಿಧ ಸಹಾಯಧನಗಳ ಘೋಷಣೆ ಜೊತೆಗೆ ಭೂ ಸಿರಿ ಎಂಬ ನೂತನ ಯೋಜನೆಯನ್ನು

ಕೂಡ ಘೋಷಿಸಿದ್ದಾರೆ. ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಸಹಾಯಧನ ಹೆಚ್ಚು ಮಾಡಿದ್ದಾರೆ. ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ಮೀಸಲು.

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ನೀಡಿರುವ ಸಿಎಂ ಬೊಮ್ಮಾಯಿ, ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಜೊತೆಗೆ ಹಲವೆಡೆ ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಚಿಕ್ಕಮಗಳೂರಿನ ಬಹು ದಿನಗಳ ಬೇಡಿಕೆಯಾದ ಪ್ರತ್ಯೇಕ ವಿಶ್ವವಿದ್ಯಾಲಯ ಘೋಷಿಸಿದ ಸಿಎಂ, ತುಮಕೂರಿಗೆ ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಘೋಷಿಸಿದ್ದಾರೆ. ಮೋದಿಯಂತೆ ಸಿಎಂ ಬೊಮ್ಮಾಯಿ ಸಹ ರೈತರ ಸ್ವಾವಲಂಬನೆಗೆ ತಂತ್ರಜ್ಞಾನದ ಮೊರೆ ಹೋಗಿದ್ದು, ಕೃಷಿ ಆಧಾರಿತ ತಂತ್ರಜ್ಞಾನ ಅಭಿವೃದ್ಧಿಗೆ ಅಲ್ಪ ಮಟ್ಟದ ಅನುದಾನ ಮೀಸಲಿಟ್ಟಿದ್ದಾರೆ. ನೀರಾವರಿ ಯೋಜನೆಗಳನ್ನು ಕಡೆಗಣಿಸಿದ ಹಾವೇರಿ ಮೂಲದ ಬೊಮ್ಮಾಯಿ, ಉತ್ತರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲವು ನೀರಾವರಿ ಯೋಜನೆಗಳಿಗೆ ಅಲ್ಪ ಮಟ್ಟದ ಅನುದಾನವನ್ನು ಮೀಸಲಿಟ್ಟಿದ್ದಾರೆ.  

ನೀರಾವರಿಗೆ 11,236 ಕೋಟಿ ಕೊಡುಗೆ

ನೀರಾವರಿಗೆ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ವತಿಯಿಂದ 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಸೃಜಿಸಲಾಗುವುದು.

Leave a Comment