ದ ಕ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.

Coastal Bulletin
ದ ಕ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬಂಟ್ವಾಳ :೨೮ನೆಯ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಶ್ರೀನಾಥ್, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಬೆಳ್ತಂಗಡಿ ಕಸಾಪ ಅಧ್ಯಕ್ಷ ಯದುಪತಿ

ಗೌಡ,ಜಿಲ್ಲಾ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಅಮ್ಮುಂಜೆ,ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್,ಕಾರ್ಯದರ್ಶಿ ದೇವಪ್ಪ ಕುಲಾಲ್,ಸರಪಾಡಿ ಅಶೋಕ್ ಶೆಟ್ಟಿ,ವಿ.ಸು.ಭಟ್, ರಜನಿ ಚಿಕ್ಕಯಮಠ ಮತ್ತಿತರರು ಉಪಸ್ಥಿತರಿದ್ದರು.

Leave a Comment