Coastal Bulletin

ಬಂಟ್ವಾಳ: ಸರ್ಕಾರದ ಸೂಚನೆಯಂತೆ ಇಲ್ಲಿನ ಉಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಯಪದವು ಸುವರ್ಣ ಸಭಾಂಗಣದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್. ಇವರು ಶನಿವಾರ ಗ್ರಾಮ ವಾಸ್ತವ್ಯ ನಡೆಸಿದರು. ಗ್ರಾಮೀಣ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರ್ಕಾರ ಅನುಷ್ಠಾನಗೊಳಿಸಿದೆ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ, ಭೂನ್ಯಾಯ ಮಂಡಳಿ ಸದಸ್ಯ ರಂಜಿತ್ ಮೈರ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್

ಮಿತ್ತೂರು, ಪಿಡಿಒ ಧನಂಜಯ, ಪ್ರಥಮ ದರ್ಜೆ ಸಹಾಯಕಿ ಗ್ರೆಟ್ಟಾ ಮಸ್ಕರೇನ್ಹಸ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ನಿಶ್ಮಿತಾ ಮತ್ತಿತರರು ಇದ್ದರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು. 

Leave a Comment