ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ಪಾಣೆಮಂಗಳೂರು ಇದರ 20 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಎ. 18 ರಂದು ಶನಿವಾರ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಎ. 16ರಂದು ಸಂಜೆ ಕರೆದ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದರು.
ವಾರ್ಷಿಕೋತ್ಸವದ ಪ್ರಯುಕ್ತ ಎ.18 ರಂದು ಬೆಳಿಗ್ಗೆ ಗಣಹೋಮ, ಬಳಿಕ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ,12.30ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 5.30 ರಿಂದ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,6.30 ರಿಂದ ಕುಸಲ್ಲ ಕುರ್ಲರಿ,7.30 ರಿಂದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು,ಅಧ್ಯಕ್ಷತೆಯನ್ನು ರೋ. ಸತೀಶ್ ಕುಮಾರ್ ಕೆ ವಹಿಸಲಿದ್ದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು ಎಂದು ಹೇಳಿದರು.
ಪ್ರತಿ ವರ್ಷದಂತೆ ಈ ವರ್ಷವು ಕೂಡ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಾರಿ ಸೇವಾ
ಕ್ಷೇತ್ರದಲ್ಲಿ ಅನಿಲ್ ದಾಸ್, ಕಲಾ ಕ್ಷೇತ್ರದಲ್ಲಿ ಮಹಮ್ಮದ್ ಯಾಸೀರ್ ಕಲ್ಲಡ್ಕ, ಸಾಮಾಜಿಕ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಬೋಳಂಗಡಿ,ಮಾಧ್ಯಮ ಕ್ಷೇತ್ರದಲ್ಲಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಕಳೆದ 20 ವರ್ಷಗಳಿಂದ ಓಂ ಶ್ರೀ ಗೆಳೆಯರ ಬಳಗ ನಿರಂತರವಾಗಿ ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ, ಕಲಾ ಕ್ಷೇತ್ರಗಳಲ್ಲಿ ಸೇವೆಯನ್ನು ಮಾಡುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ಕೂಡ ಇಂತಹ ಸಾಮಾಜಿಕವಾದ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡುವ ಆಶಯ ನಮ್ಮದಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ಗೌರವಾಧ್ಯಕ್ಷ ನಾಗೇಶ್ ಕುಲಾಲ್, ಮಹಿಳಾ ಮಂಡಲದ ಅಧ್ಯಕ್ಷೆ ನಳಿನಿ ಶುಭಕರ ಉಪಸ್ಥಿತರಿದ್ದರು.













