Coastal Bulletin

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬಂಟ್ವಾಳ, ಬಂಟ್ವಾಳ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಬಂಟ್ವಾಳ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಕೊಡಂಗೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಬಂಟ್ವಾಳ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಭಾಗ್ಯಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ ಪಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ವೈ ತಳವಾರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೃಷ್ಣಮೂರ್ತಿ ಎನ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಗಣೇಶಾನಂದ ಸೋಮಯಾಜಿ, ಸಹಾಯಕ ಸರಕಾರಿ ಅಭಿಯೋಜಕಿ ಹರಿಣಿ

ಕುಮಾರಿ ಡಿ, ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಧೀರ್ ಜಿ, ಬಂಟ್ವಾಳ ಕಾರ್ಮಿಕ ಇಲಾಖಾ ನಿರೀಕ್ಷಕಿ ಮರ್ಲಿನ್ ಡಿ'ಸೋಜಾ ಮೊದಲಾದವರು ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ಶೈಲಜಾ ರಾಜೇಶ್ ವಿಶ್ವ ಬಾಲ ಕಾರ್ಮಿಕ ದಿನದ ಬಗ್ಗೆ ಕಾನೂನು ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಅಶೋಕ್ ಕುಮಾರ್ ಸ್ವಾಗತಿಸಿ, ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು 

Leave a Comment