ನಾಳೆ ಜು. 18ರಂದು ದ ಕ ಜಿಲ್ಲೆಯಾದ್ಯಂತ ಪಿ ಯು ಸಿ ವರೆಗೆ ಶಾಲೆಗೆ ರಜೆ.

Coastal Bulletin
ನಾಳೆ ಜು. 18ರಂದು ದ ಕ ಜಿಲ್ಲೆಯಾದ್ಯಂತ ಪಿ ಯು ಸಿ ವರೆಗೆ ಶಾಲೆಗೆ ರಜೆ.

ಬಂಟ್ವಾಳ :ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ,ಜು.18 ರಂದು ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.

Leave a Comment