ಬಂಟ್ವಾಳ: ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಳೆದ ಬಾರಿ ಚುನಾವಣಾ ಪ್ರಚಾರದ ಸಂದರ್ಭ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ ಮಾತನ್ನು ನೆನಪಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೆ, ಕರ್ನಾಟಕವನ್ನು ಎಟಿಎಂ ಮಾಡುತ್ತದೆ ಎಂಬುದು ಈಗ ಸಾಬೀತಾಗುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇನೆ ಎಂದಿದ್ದ ಉಚಿತ ಸ್ಕೀಮುಗಳಿಂದ ಈಗ ರಾಜ್ಯ ದಿವಾಳಿಯಾಗುವ ಅಂಚಿನಲ್ಲಿದ್ದು, ಇದೀಗ ಗುತ್ತಿಗೆದಾರನ ಮನೆಯಲ್ಲಿ ಹಣ ಸಿಕ್ಕಿರುವುದು ಭ್ರಷ್ಟಾಚಾರ ಇದೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ
ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಬಂಟ್ವಾಳ ನಗರ ನೀರು ಸರಬರಾಜು ಮಂಡಳಿ ಮಾಜಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್. ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬುಡಾ ಮಾಜಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ . ಕಲೆ-ಸಾಂಸ್ಕೃತಿಕ ಪ್ರಕೋಷ್ಠದ ಜಿಲ್ಲಾಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ ಪ್ರಮುಖರಾದ ಮೋನಪ್ಪ ದೇವಸ್ಯ, ರೊನಾಲ್ಡ್ ಡಿ'ಸೋಜಾ, ಪುರುಷೋತ್ತಮ ಸಾಲ್ಯಾನ್, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ಗಣೇಶ್ ರೈ ಮಾಣಿ, ಉಮೇಶ್ ಅರಳ, ಆನಂದ ಶಂಭೂರು, ಮತ್ತಿತರರಿದ್ದರು. ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.















