ಬಂಟ್ವಾಳ :ನವರಾತ್ರಿ ಉತ್ಸವ ಅಂಗವಾಗಿ ಆಯುಧ ಪೂಜಾ ಕಾರ್ಯಕ್ರಮ ತಾಲೂಕು ಕಚೇರಿಯಲ್ಲಿ ನಡೆಯಿತು.ಅರ್ಚಕ ರಾಘವೇಂದ್ರ ಮಯ್ಯರಬೈಲ್ ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಭಾಗವಹಿಸಿ ನವರಾತ್ರಿಯ ಈ ಸಂದರ್ಭದಲ್ಲಿ ದುರ್ಗಾ ಮಾತೆ ಎಲ್ಲಾರಿಗೂ ಆರೋಗ್ಯ ಸಂಪತ್ತು, ನೆಮ್ಮದಿ ನೀಡಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರ
ನಾಥ್ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು













