breaking news

ಮುದೆಲ್ ಮುಟ್ಟಿ :ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಎ.ಸಿ. ಭಂಡಾರಿ ಅವರಿಗೆ ಹುಟ್ಟೂರ ಸನ್ಮಾನ

Coastal Bulletin
ಮುದೆಲ್ ಮುಟ್ಟಿ :ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಎ.ಸಿ. ಭಂಡಾರಿ ಅವರಿಗೆ ಹುಟ್ಟೂರ ಸನ್ಮಾನ

ಬಂಟ್ವಾಳ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಡೆ ಬೈಲು ಚಂದ್ರಶೇಖರ ಭಂಡಾರಿ ಅವರಿಗೆ ಮುದೆಲ್ ಮುಟ್ಟಿ ನಾಲ್ಕೈತಾಯ ದೈವಸ್ಥಾನದ ಅಭಿವೃದ್ಧಿ ಸಮಿತಿ ವತಿಯಿಂದ ಹುಟ್ಟೂರ ಸನ್ಮಾನ ನೀಡಿ ಗೌರವಿಸಲಾಯಿತು.


2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಅವರು ಧಾರ್ಮಿಕ, ರಾಜಕೀಯ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ದೈವಸ್ಥಾನದಲ್ಲಿ ಗ್ರಾಮದ ದೈವ-ದೇವರ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ಕೊಟ್ಟಾರಿ, ಸಜಿಪ ಮುನ್ನೂರು ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ್ ಬಾಸಿತ್ರಾಯ, ಡಾ.

ಜಯಪ್ರಕಾಶ್ ತಪೋವನ ಅಲಾಡಿ, ದೈವಸ್ಥಾನದ ಗಡಿಪ್ರಧಾನ ದುಗ್ಗಪ್ಪ ಭಂಡಾರಿ ಯಾನೆ ಗಂಗಾಧರ ಭಂಡಾರಿ, ರಮಾನಾಥ ಶೆಟ್ಟಿ, ದಯಾನಂದ ಶೆಟ್ಟಿ, ಧೀರಜ್ ಶೆಟ್ಟಿ, ಗಂಗಾಧರ ಗಟ್ಟಿ, ಚಂದ್ರಶೇಖರ ಗಟ್ಟಿ, ಸತೀಶ್ ಗಟ್ಟಿ ಸೇರಿದಂತೆ ಗುತ್ತು ಮನೆತನದವರು, ಚಾಕಿರಿವರ್ಗದವರು ಹಾಗೂ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

ಲಕ್ಷ್ಮೀಶ್ ಆಳ್ವ ಗುವೆಲ್ಮಾರ್ ಸನ್ಮಾನ ಪತ್ರ ವಾಚಿಸಿದರು. ಸುಕುಮಾರ್ ಬಂಟ್ವಾಳ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿವಣ್ಣ ಖಂಡಿಗ ವಂದಿಸಿದರು.


Leave a Comment