breaking news

.ಸಿ.ರೋಡ್‌ :ಮಧುಮೇಹದ ಆರಂಭಿಕ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Coastal Bulletin
.ಸಿ.ರೋಡ್‌ :ಮಧುಮೇಹದ ಆರಂಭಿಕ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ವಿಶ್ವ ಮಧುಮೇಹ ದಿನಾಚರಣೆ 2026ರ ಅಂಗವಾಗಿ ಫಾದರ್ ಮುಲ್ಲರ್ ಆಸ್ಪತ್ರೆ ಹಾಗೂ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆಯ ವಯಸ್ಕರ ಆರೋಗ್ಯ ಶುಶ್ರೂಷಾ ವಿಭಾಗದ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳದ ಸಹಯೋಗದಲ್ಲಿ ನ. 14ರಂದು ಬಿ.ಸಿ.ರೋಡ್‌ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಧುಮೇಹ ಜಾಗೃತಿ, ಶಿಕ್ಷಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ನಾರಾಯಣ ಗುರು ವೃತ್ತದಿಂದ ಲಯನ್ಸ್ ಕ್ಲಬ್‌ವರೆಗೆ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಾಧ್ಯಾಪಕ ಡಾ. ಅಮಿತ್ ವಿಜಯ್ ಲಿಯೋನ್ ಡಿಸೋಜಾ ಮಾತನಾಡಿ, ಮಧುಮೇಹದ ಪರಿಣಾಮಗಳು, ತೊಡಕುಗಳು, ಆರಂಭಿಕ ಪತ್ತೆ ಹಾಗೂ ಸೂಕ್ತ ಚಿಕಿತ್ಸೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಮುಖ್ಯ ಆಹಾರ ತಜ್ಞೆ ಸ್ಯಾಂಡಿಸ್ ಜೋಸೆಫ್ ಅವರು ಮಧುಮೇಹ ನಿಯಂತ್ರಣದಲ್ಲಿ ಸಮತೋಲಿತ ಆಹಾರ, ಆರೋಗ್ಯಕರ ಜೀವನಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಯ ಮಹತ್ವವನ್ನು ವಿವರಿಸಿದರು.

ಲಯನ್ ಡಾ. ಮುಕುಂದ ಪ್ರಭು ಮಾತನಾಡಿ, ಆರೋಗ್ಯವೇ ನಿಜವಾದ ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಲಯನ್ ವಸಂತ್ ಕುಮಾರ್ ಶೆಟ್ಟಿ ಮಾತನಾಡಿ, ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗಿದ್ದು, ಸಾರ್ವಜನಿಕರು ಇಂತಹ ಶಿಬಿರಗಳ ಪ್ರಯೋಜನ

ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ನಗರ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಆರೋಗ್ಯ ಅಧಿಕಾರಿ ನೂರಾಬಿ ಶೇಕ್, ವಿನಯಾ ಎಸ್. ಭಟ್, ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುವಿಧಾ ಕಾಮತ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ರೀನಾ ವಿಲ್ಮಾ ಫ್ರಾಂಕ್ ಹಾಗೂ ಡಾ. ಪದ್ಮಕುಮಾರ್ ಉಪಸ್ಥಿತರಿದ್ದರು.

ನರ್ಸಿಂಗ್ ವಿದ್ಯಾರ್ಥಿಗಳು ರಸಪ್ರಶ್ನೆ, ಪಾತ್ರಾಭಿನಯ ಹಾಗೂ ಶೈಕ್ಷಣಿಕ ಪ್ರದರ್ಶನಗಳ ಮೂಲಕ ಮಧುಮೇಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ರಕ್ತದಲ್ಲಿನ ಸಕ್ಕರೆ ಪ್ರಮಾಣ, ರಕ್ತದೊತ್ತಡ, ಬಾಡಿ ಮಾಸ್ ಇಂಡೆಕ್ಸ್ ಹಾಗೂ ಇಸಿಜಿ ತಪಾಸಣೆ ನಡೆಸಲಾಯಿತು. ವೈದ್ಯಕೀಯ ಮತ್ತು ಆಹಾರ ತಜ್ಞರ ಸಲಹೆಯನ್ನೂ ನೀಡಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ಕಾರ್ಯಕ್ರಮ ಸಂಯೋಜಕಿ ತ್ರಿವೇಣಿ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿಗಳು, ವೈದ್ಯರು, ನರ್ಸಿಂಗ್ ಸಿಬ್ಬಂದಿ, ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕೊನೆಯಲ್ಲಿ ತ್ರಿವೇಣಿ ವಂದಿಸಿದರು.

Leave a Comment