ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ಬಂಟ್ವಾಳ ವಲಯದ ವತಿಯಿಂದ ನರಿಕೊಂಬು ನಾಟಿ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು
ಈ ಸಂದರ್ಭದಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ವಲಯದ ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು.
ಕೃಷ್ಣರಾಜ್ ರಾವ್ ಸ್ವಾಗತಿಸಿದರು. ರವಿ ಕಲ್ಪನೆ
ವಂದಿಸಿದರು. ಮುಖ್ಯ ಶಿಕ್ಷಕಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ವಲಯದ ಮಾಜಿ ಅಧ್ಯಕ್ಷರಾದ ದಯಾನಂದ್ ಬಂಟ್ವಾಳ್, ಆನಂದ್ ಎನ್., ಉಪಾಧ್ಯಕ್ಷರಾದ ಹರೀಶ್ ನಾಟಿ, ವಿಠಲ್ ಕೋಟ್ಯಾನ್, ಮಾಜಿ ಪಂಚಾಯತ್ ಅಧ್ಯಕ್ಷ ಕಿಶೋರ್ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.









