ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿಯ ದೀರ್ಘಾಯಸ್ಸುಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುತ್ತಿದ್ದ ಮಹಾ ಮೃತ್ಯುಂಜಯ ಯಾಗ ಸಂಪನ್ನಗೊಂಡಿದೆ.
ಶ್ರೀಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಯಾಗ ನಡೆದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಸಚಿವರಾದ ಕೆ.ಎಸ್ ಈಶ್ವರಪ್ಪ, ಸಿ.ಸಿ. ಪಾಟೀಲ, ಶಶಿಕಲಾ ಜೊಲ್ಲೆ ಆದಿಯಾಗಿ ನೂರಾರು ಮಂದಿ ಈ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ
ಅಮೃತವರ್ಷಿಣಿ ಸಭಾಂಗಣದ ಏಳು ಹೋಮಕುಂಡಗಳಲ್ಲಿ ಯಾಗ ನಡೆದಿದ್ದು, ಏಳು ಕುಂಡಗಳಲ್ಲೂ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರಿಂದ ಮಂತ್ರಘೋಷ, ವಿವಿಧ ದ್ರವ್ಯಗಳ ಅರ್ಪಣೆ ಯಾಗಕುಂಡಕ್ಕೆ ಹಾಕಲಾಗಿದೆ. ಈ ಯಾಗದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 140ಕ್ಕೂ ಹೆಚ್ಚು ಅರ್ಚಕರು ಭಾಗಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಯಾಗದ ಪೂರ್ಣಾಹುತಿ ಮಾಡಲಾಗಿದೆ.














