Coastal Bulletin

ಬಂಟ್ವಾಳ : ಇಲ್ಲಿನ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ನೂತನವಾಗಿ ಪುನರ್ ನಿರ್ಮಾಣಗೊಂಡ ದೈವಸ್ಥಾನದಲ್ಲಿ ಶ್ರೀ ಕೋರ್ದಬ್ಬು ತನ್ನಿಮಾನಿಗ, ಗುಳಿಗ ಪಂಜುರ್ಲಿ ಹಾಗೂ ರಾಹು ದೈವಗಳ ಪುನರ್ ಪ್ರತಿಷ್ಠೆ, ಕಲಾಶಾಭಿಷೇಕವು ವಿವಿಧ ವೈದಿಕ ಕಾರ್ಯಕ್ರಮದೊಂದಿಗೆ ವೇದಮೂರ್ತಿ ಡಾ. ವೆಂಕಟೇಶ ತಂತ್ರಿ ಪೊಳಲಿಯವರ ನೇತೃತ್ವದಲ್ಲಿ ಗುರುವಾರ ನಡೆಯಿತು.

ಬೆಳಿಗ್ಗೆ 8.45ರ ಮೀನ ಲಗ್ನದಲ್ಲಿ ಶ್ರೀ ಕೋರ್ದಬ್ಬು ತನ್ನಿಮಾನಿಗ, ಗುಳಿಗ ಪಂಜುರ್ಲಿ ಹಾಗೂ ರಾಹು ದೈವಗಳ ಪುನರ್ ಪ್ರತಿಷ್ಠೆ, ಕಲಾಶಾಭಿಷೇಕ ಹಾಗೂ ದೈವಗಳ ನರ್ತನ ಸೇವೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಪಲ್ಲಪೂಜೆ, ಅನ್ನಸಂತರ್ಪಣೆ ನೆರವೇರಿತು.

ಬೆಳಗ್ಗಿನಿಂದ ವಿವಿಧ ಭಜನಾ ತಂಡಗಳಿಂದ ಹರಿನಾಮ ಸಂಕೀರ್ತನೆ. ಪುತ್ತೂರು ಜಗದೀಶ ಆಚಾರ್ಯ ಬಳಗದಿಂದ

ಭಕ್ತಿ ರಸ ಸಂಜೆ, ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸುಕೇಶ್ ಚೌಟ ಬಡಕಬೈಲು, ಚಂದ್ರಶೇಖರ ಶೆಟ್ಟಿ ಬಡಕಬೈಲು, ಕಾರ್ಯದರ್ಶಿ ಶೇಖರ ಬಂಗೇರ ಗಾಣೆಮಾರ್, ಪ್ರಧಾನ ಕಾರ್ಯದರ್ಶಿ ದೇವದಾಸ್ ಅಯರೆಮಾರ್, ಗುತ್ತಿನವರು, ಗುರಿಕಾರರು, ಅರ್ಚಕ ವೃಂದ ಹಾಗೂ ಸಮಿತಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

Leave a Comment