ಮಂಗಳೂರು: ಟಿಪ್ಪರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಸರ್ಕಲ್‌ನಲ್ಲಿ ನಡೆದಿದೆ.
ಸ್ಯಾಮುವೆಲ್ ಎಂಬವರು ತನ್ನ ಮಗಳ ಜತೆ ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಿಂದಾಗಿ ಸ್ಕೂಟರ್ ಟಿಪ್ಪರ್‌ನ ಅಡಿಗೆ ಸಿಲುಕಿ
ತಂದೆ ಮತ್ತು ಅವರ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ಘಟನೆ ನಡೆದ ಬೆನ್ನಲ್ಲೇ ಸ್ಥಳದಲ್ಲಿದ್ದ ಸ್ಥಳೀಯರು ಟಿಪ್ಪರ್ ಚಾಲಕನಿಗೆ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.














