Coastal Bulletin

ಬಂಟ್ವಾಳ :ಮಾ.15ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮ ಪಂಚಾಯತಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ತರಭೇತಿಯಲ್ಲಿ ಪಂಚಾಯತ್ ಅಧ್ಯಕ್ಷ ರಾದ ಸರಸ್ವತಿ,ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು. ಸಂಜೀವಿನಿ ಘಟಕದ ಮೇಲ್ವಿಚಾರಕಿ , ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು, ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ

ಸಂಸ್ಥೆಯ ಸಿಬ್ಬಂದಿ ಚಂದ್ರ ಶೇಖರ್ ಜಲಜೀವನ್ ಯೋಜನೆಯ ಉದ್ದೇಶ ಮತ್ತು ಮಳೆ ನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ಬಂಟ್ವಾಳ ತಾಲೂಕಿನ ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕರಾದ ಚಂದ್ರಶೇಖರ್ ಕಾರ್ಯಕ್ರಮವನ್ನು ಆಯೊಜಿಸಿ. ಯಶಸ್ವಿಗೊಳಿಸಿದರು

Leave a Comment