ಬಂಟ್ವಾಳ :ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಮಾ. 17ರಂದು ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.
ಪ್ರಥಮ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ನಿರ್ಧಾರ ಮಾಡಿದೆ. ಈ ಮೂಲಕ ಮಾನವೀಯತೆಯನ್ನು ಮೆರೆದಿದೆ. ಮೃತರ ಕಣ್ಣು, ಲಿವರ್, ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ವರದಿಯಾಗಿದೆ.
ಪ್ರಥಮ್ ತಂದೆ ವಾಮನ ಸಾಲ್ಯಾನ್ ಮತ್ತು ಸಹೋದರ ಆತನ
ಎರಡು ಕಣ್ಣು, ಎರಡು ಕಿಡ್ನಿ, ಲಿವರ್, ಕರುಳಿನ ಭಾಗವನ್ನು ಇನ್ಯಾರದ್ದೋ ಬದುಕಿಗೆ ಬೆಳಕಾಗುವಂತೆ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಮೂಲಕ ಪ್ರಥಮ್ ಬಂಗೇರ ಸಾವಿನ ಬಳಿಕವೂ ಅಮರನಾಗಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಪ್ರಥಮ್ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ತಂದೆ ಮತ್ತು ಸಹೋದರನೊಂದಿಗೆ ವಾಸವಾಗಿದ್ದ ಪ್ರಥಮ್ ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದಾರೆ.














