ಕಲ್ಲಡ್ಕ: ಮಾ.20ರಂದು ಶ್ರೀರಾಮ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ.

Coastal Bulletin
ಕಲ್ಲಡ್ಕ: ಮಾ.20ರಂದು ಶ್ರೀರಾಮ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ.

ಬಂಟ್ವಾಳ:ತಾಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ  "ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ" ಒಂದು ಚಿಂತನೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವು ಮಾ.20ರಂದು ನಡೆಯಲಿದ್ದು, ಟಿ ವಿ 9 ಕನ್ನಡ ವಾಹಿನಿಯ ನಿರೂಪಕ ರಂಗನಾಥ ಭಾರದ್ವಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ. ಪ್ರಭಾಕರ್ ಭಟ್ ಹೇಳಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಧ್ಯಾಪಕಿ ಡಾ.ಆರತಿ ವಿ.ಬಿ., ಮಾಜಿ ಶಾಸಕ ಪಿ ರಾಜೀವ ಕುಡಜಿ, ಚಿಂತಕ ರೋಹಿತ್ ಚಕ್ರತೀರ್ಥ, ಅಖಿಲ ಭಾರತೀಯ ಟೋಳಿ ಸದಸ್ಯ ರಘುನಂದನ್ ಭಾಗವಹಿಸುವರು ಎಂದರು. 

ಕಳೆದ 12 ವರ್ಷಗಳಿಂದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡ ಒಟ್ಟು 11 ವಿಚಾರ ಸಂಕಿರಣ ನಡೆದಿದ್ದು, ಈ ಬಾರಿ 60ಕ್ಕೂ ಮಿಕ್ಕಿ ವಿಶ್ವ ವಿದ್ಯಾನಿಲಯಗಳಿಂದ ಸುಮಾರು 750ಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಯುವ ಜನರಲ್ಲಿ ರಾಷ್ಟ್ರೀಯತೆ ಜೊತೆಗೆ ನೈಜ ಇತಿಹಾಸ ತಿಳಿಸುವ ಪ್ರಾಮಾಣಿಕ ಪ್ರಯತ್ನ ಶ್ರೀರಾಮ ವಿದ್ಯಾ ಸಂಸ್ಥೆ ನಡೆಸುತ್ತಿದೆ' ಎಂದು ಅವರು ತಿಳಿಸಿದರು. 

ದೇಶದಲ್ಲಿ ವಸಾಹತುಶಾಹಿ ಕಾಲದ ವಿದೇಶಿ ಆಳ್ವಿಕೆಯಿಂದ ದೇಶದ ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆ ಜೊತೆಗೆ ಇಲ್ಲಿನ ಜನರ ಮನೋಭಾವ ಮತ್ತು ಸಂಸ್ಕೃತಿಯ ಮೇಲೂ ಪ್ರಭಾವ ಬೀರಿದೆ. ಇದರಿಂದಾಗಿ ಭಾರತೀಯ ಸಂಸ್ಕೃತಿಗೆ ಬದಲಾಗಿ ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹೆಚ್ಚಳಗೊಂಡಿದೆ ಎಂದು ಅವರು ವಿವರಿಸಿದರು. 

ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ,ಸಂಚಾಲಕಿ ಲಕ್ಮೀ ರಘುರಾಜ್ ಇದ್ದರು.


Leave a Comment