ಬಂಟ್ವಾಳ : ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಎ.24ರಂದು ನಡೆಯಲಿರುವ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಯುಕ್ತ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ ನಡೆಯಿತು.
ಪ್ರಗತಿಪರ ಕೃಷಿಕ ಕಟ್ಟೆಮನೆ ಉದಯ ಕುಮಾರ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಉದ್ಯಮಿ ಪ್ರವೀಣ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬಂಟ್ವಾಳ ಮೆಸ್ಕಾಂ ಮುಖ್ಯ ಕಾರ್ಯ ನಿವರ್ಾಹಕ ಅಭಿಯಂತರ ರಾಮಚಂದ್ರ ಮಂಗಳ ವಸ್ತ್ರ ವಿತರಿಸಿದರು. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ , ಕಟ್ಟೆಮನೆ ವಸಂತ ಕುಮಾರ್ ಜೈನ್, ಕಟ್ಟೆಮನೆ ದಿಲೀಪ್ ಕುಮಾರ್ ಜೈನ್, ಉಪ ತಹಶೀಲ್ದಾರ್ ದಿವಾಕರ ಮುಗುಳ್ಯ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರ್ಶಿಣಿ
ಪುಷ್ಪಾನಂದ, ಶ್ರೀ ರಾಮಾಂಜನೇಯ ಭಜನಾ ಮಂದಿರ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ, ಪ್ರಮುಖರಾದ ಕಾಂತಪ್ಪ ಕರ್ಕೇರ,ರಮಾನಂದ, ದಯಾನಂದ ನಾಯ್ಕ್ ಎಡ್ತೂರು, ಕರುಣಾಕರ ಮಾಳಿಗೆ ಮನೆ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು, ಮಾಜಿ ಅಧ್ಯಕ್ಷ ಮಾಧವ ಬಂಗೇರ ಇದ್ದರು.
ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಮತ್ತು ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಗುರಿಕಾರರಾಗಿ ತಾಂಬೂಲ ಹಸ್ತಾಂತರಿಸಿದರು. ಕ್ಲಬ್ಬಿನ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ, ವಂದಿಸಿದರು. ಅಮೃತಾ ಎಸ್. ಕಾರ್ಯಕ್ರಮ ನಿರೂಪಿಸಿದರು.














