Coastal Bulletin

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ

ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.


Leave a Comment