ಹಿರ್ಗಾನ: ಸರಕಾರಿ ಪ್ರೌಢಶಾಲೆ ಹಿರ್ಗಾನದಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಪ್ರಶಾಂತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲ ಸುಧಾಕರ್ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, "ಮೊಬೈಲ್ ಮಾಯಾಲೋಕದಿಂದ ವಿದ್ಯಾರ್ಥಿಗಳು ಹೊರಬಂದು ಸಂಸ್ಕಾರಯುತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು" ಎಂದು
ಕರೆ ನೀಡಿದರು.
ಮುಖ್ಯ ಶಿಕ್ಷಕಿ ಶ್ರೀಮತಿ ಗ್ರೆಟ್ಟಾ ಮರಿನಾ ಸಾಲಿಸ್ ಶುಭಹಾರೈಸಿದರು. ಶ್ರೀಮತಿ ಕೆ.ಪಿ. ಪದ್ಮಾವತಿ, ಹಿರಿಯ ಸದಸ್ಯ ಜಹೀರ್ ಅಹಮದ್ ಉಪಸ್ಥಿತರಿದ್ದರು.
ಡಾ. ಸಂತೋಷ್ ಪೂಜಾರಿ ಸ್ವಾಗತಿಸಿದರು. ಶ್ರೀ ಹೃದಯ್ ಕುಲಾಲ್ ವಂದಿಸಿದರು. ಶ್ರೀ ಹರಿಶ್ಚಂದ್ರ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.















