ಬರಿಮಾರು: ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ.

Coastal Bulletin
ಬರಿಮಾರು: ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ.

ಬಂಟ್ವಾಳ :ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು ಇಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ಶೈಲಜಾ ರಾಜೇಶ್ ಉದ್ಘಾಟಿಸಿ ಮಾತನಾಡಿ,ದೇಶದ ಸ್ವಾತಂತ್ರ್ಯಕ್ಕೆ ಬಲಿದಾನ ಮಾಡಿದ ಮಹಾನ್ ನಾಯಕ ನಾಯಕಿಯರನ್ನು ನೆನಪಿಸಿದರು. ಹಾಗೂ ಆಟಿದ ಮಹತ್ವದ ಬಗ್ಗೆ ತಿಳಿಸಿ,ಕನ್ನಡ ಮಾಧ್ಯಮದಲ್ಲಿ ಕಲಿತ ಎಲ್ಲರಲ್ಲೂ ಶಿಸ್ತು ಸಂಸ್ಕಾರ ಸಾಧ್ಯ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

 ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ನ

ಅಧ್ಯಕ್ಷರು , ಉಪಾಧ್ಯಕ್ಷರು , ಸದಸ್ಯರು ,ನಿವೃತ್ತ ಮುಖ್ಯ ಶಿಕ್ಷಕರು , ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದ , ಶಾಲಾ ಮಕ್ಕಳ ಹೆತ್ತವರು ಹಳೆ ವಿದ್ಯಾರ್ಥಿಗಳು ಹಾಗೂ ಊರವರು ಕಾರ್ಯ ಕ್ರಮದಲ್ಲಿ ಭಾಗಿಯಾಗಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಯವರು ಸರ್ವರವರನ್ನು ಸ್ವಾಗತಿಸಿದರು.

Leave a Comment