ಬಂಟ್ವಾಳ :ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ 77ನೆಯ ಸ್ವಾತಂತ್ರ್ಯೋತ್ಸವನ್ನು ಯುವಸಂಗಮ ಸೇವಾ ಟ್ರಸ್ಟ್ (ರಿ )ಶೇಡಿಗುರಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶೇಡಿಗುರಿ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಹಾಗೂ ಶೇಡಿಗುರಿ ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆಸಲಾಯಿತು.
ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಯವರು ಧ್ವಜಾರೋಹಣ ನಡೆಸಿ ಸಂದೇಶ ನೀಡಿದರು.
ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್, ಹಾಗೂ ಯುವ ಸಂಗಮ ಸೇವಾ ಟ್ರಸ್ಟ್ ನಲ್ಲಿ ಹಿರಿಯರಾದ ಡೀಕಯ್ಯ ಪೂಜಾರಿಯವರು ಧ್ವಜಾರೋಹಣಗೈದು ಸಂದೇಶ ನೀಡಿದರು.
ಈ ಸಂದರ್ಭ ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ನಿವೃತ್ತ ಯೋಧರಾದ ಹರೀಶ್ ಡಿ. ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು,ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಪೋಷಕರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಗು ನೃತ್ಯಗಳನ್ನು ಪ್ರಸ್ತುತಪಡಿಸಿದರು.















