ಬಂಟ್ವಾಳ :ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇಲ್ಲಿ ಎಸ್ ಎಲ್ ಭೈರಪ್ಪ ಪ್ರತಿಷ್ಠಾನ (ರಿ) ಇದರ ಸಹಯೋಗದಲ್ಲಿ ಪದ್ಮಭೂಷಣ ಡಾ. ಎಸ್ ಎಲ್ ಭೈರಪ್ಪನವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ "ಡಾ. ಎಸ್ ಎಲ್ ಭೈರಪ್ಪ- ಒಂದು ನೆನಪು" ವಿಶೇಷ ಉಪನ್ಯಾಸ ಸೆ 18ರಂದು ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಶಂಕರಾಚಾರ್ಯ ಸಭಾಂಗಣದಲ್ಲಿ ನಡೆಯಿತು.
ಖ್ಯಾತ ವಾಗ್ಮಿಗಳು, ಶಿಕ್ಷಣ ತಜ್ಞರು ಮತ್ತು ಸೃಜನಶೀಲ ಅಧ್ಯಾಪನಕೇಂದ್ರ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಗುರುರಾಜ ಕರಜಗಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮೊದಲ ಅವಧಿಯಲ್ಲಿ ಶಿಕ್ಷಕರಿಗಾಗಿ "ಶಿಕ್ಷಕನ ಮನೋಭೂಮಿಕೆ" ಹಾಗೂ ಎರಡನೇ ಅವಧಿಯಲ್ಲಿ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಜೀವನವೊಂದು ಸಾಧನಾಪಥ" ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ
ಹಿರಿಯರೂ ಆದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಸ್ತಾವನಾ ನುಡಿಗಳನ್ನಾಡಿದರು.
ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸಂಚಾಲಕ ವಸಂತಮಾಧವ ಇವರ ಗೌರವ ಉಪಸ್ಥಿತಿಯಲ್ಲಿ ಉಪನ್ಯಾಸ ಕಾರ್ಯಕ್ರಮವು ನಡೆಯಿತು. ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಗಣ್ಯರನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಪ್ರೀತ ಮಾತಾಜಿ ಇವರು ವಂದನಾರ್ಪಣೆಗೈದು ಕಾರ್ಯಕ್ರಮ ನಿರ್ವಹಿಸಿದರು.













