ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಮುರಿಯಾಜೆ ನಿವಾಸಿ ಚಂದ್ರಹಾಸ ಅವರ ಪುತ್ರ ಸುಭೋದ್ ಸಿ (14 ವರ್ಷ ಪ್ರಾಯ) ಎಂಬುವವರಿಗೆ ನ. 17ರಂದು ಆದಿತ್ಯವಾರ ಸಾಯಂಕಾಲ 5.00 ಗಂಟೆಗೆ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕ ಕಲ್ಲಡ್ಕ ಶ್ರೀರಾಮ ಹೈಸ್ಕೂಲ್ ನ ಎಂಟನೇ ತರಗತಿ ವಿದ್ಯಾರ್ಥಿಯಾಗಿರುತ್ತಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ವಿಟ್ಲ ಕಂದಾಯ ನಿರೀಕ್ಷಕರಾದ
ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್, ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹರೀಶ್ ವಾಲ್ತಾಜೆ ರವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.















