ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ.

Coastal Bulletin
ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ.

ಬಂಟ್ವಾಳ :ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನ.18ರಂದು ಮಂಗಳವಾರ ತುಳುಭವನ ಉರ್ವಸ್ಟೋರ್, ಮಂಗಳೂರು ಇಲ್ಲಿ ಆಯೋಜಿಸಿದ 2025-26ನೇ ಸಾಲಿನ ಕಲಾ ಪ್ರತಿಭೋತ್ಸವ ಜಿಲ್ಲಾ ಮಟ್ಟದ ಬಾಲಪ್ರತಿಭೆ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ನಿನಾದ್ ಕೈರಂಗಳ ದ್ವಿತೀಯ ಸ್ಥಾನ ಪಡೆದು ಮೈಸೂರಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಈತ ಕಲಾವಿದ ತಾರಾನಾಥ್ ಕೈರಂಗಳ ಹಾಗೂ ಶಿಕ್ಷಕಿ ತುಳಸಿ ಕೈರಂಗಳ ಇವರ ಪುತ್ರ.

Leave a Comment