Coastal Bulletin

ಬಂಟ್ವಾಳ :ಡಿ.17ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಲ್ಲರಿ ಅಂಗನವಾಡಿ‌ಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೊಜಿಸಲಾಗಿತ್ತು.

ಈ ತರಬೇತಿಯಲ್ಲಿ  ಪಂಚಾಯತ್ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ,ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು  ಸೇರಿ ಒಟ್ಟು  35 ಮಂದಿ ಭಾಗವಹಿಸಿದ್ದರು. ಜಲ ಜೀವನ್  ಮಿಷನ್ ನ  ಅನುಷ್ಠಾನ ಬೆಂಬಲ ಸಂಸ್ಥೆಯ  ಹೆಚ್.ಆರ್.ಡಿ ಚರಣ್

ರಾಜ್ ರವರು ಮಳೆ  ನೀರು ಕೊಯ್ಲು ಘಟಕ ರಚನೆಯ ಮೂಲಕ ನೀರಿನ ಸಂರಕ್ಷಣೆ ಮಾಡುವ ಬಗ್ಗೆ ಮತ್ತು ಸ್ವಚ್ಛತೆಯ  ಬಗ್ಗೆ  ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ  ಅನುಷ್ಟಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ವಿಲ್ಮಾರವರು  ಬೂದುನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Leave a Comment