Coastal Bulletin

ಬಂಟ್ವಾಳ: ಜನಾಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಸಮಿತಿ ಇದರ ಸಭೆಯು ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಉದ್ಘಾಟಿಸಿದರು

ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಜನಜಾಗೃತಿ ವೇದಿಕೆ ಅವಕಾಶ ನೀಡಿದೆ. ಜನಜಾಗೃತಿ ವೇದಿಕೆಯ ಮೂಲಕ ಮಾಡಿದ ಸೇವಾ ಕಾರ್ಯಗಳಿಂದ ಸಿಗುವ ಸಂತೃಪ್ತಿ ಯಾವುದೇ ಸಂಘಟನೆಯ ಕಾರ್ಯದಲ್ಲೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು. 

ರೋಟರಿ ಕ್ಲಬ್ ನಿಯೋಜಿತ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾದ ಪ್ರಕಾಶ್ ಕಾರಂತ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಜನೆಯ

ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅವರನ್ನು ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು. 

ಈ ಸಂದರ್ಭ ಬಂಟ್ವಾಳ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ರೋನಾಲ್ಡ್ ಡಿಸೋಜಾ ಅವರನ್ನು ಆಯ್ಕೆ ಮಾಡಲಾಯಿತು. ವಿವಿಧ ವಲಯಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ಗುರುತಿಸಲಾಯಿತು. ವೇದಿಕೆಯಲ್ಲಿ ಮಾಧವ ವಳವೂರು, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯವ ವಿಟ್ಲ ಯೋಜನಧಿಕಾರಿ ಚನ್ನಪ್ಪ ಗೌಡ ಉಪಸ್ಥಿತರಿದ್ದರು. 

ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ತುಂಬೆ ವಲಯದ ಮೇಲ್ವಿಚಾರಕಿ ಮೇಲ್ವಿಚಾರಕಿ ಮಮತಾ ವಂದಿಸಿದರು.


Leave a Comment