ನಾವೂರ: ನೇತ್ರಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಮೃತ್ಯು.

Coastal Bulletin
ನಾವೂರ: ನೇತ್ರಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಮೃತ್ಯು.

ಬಂಟ್ವಾಳ: ನದಿಯ ಬದಿಗೆ ತೆರಳಿದ ವೇಳೆ ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ವೇಳೆ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.

ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್‌ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ

ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಕೂಡಲೇ ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿ ಹಾಕಿದ್ದಾರೆ ಆದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Comment