ಬಂಟ್ವಾಳ :ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ(ಮೆಸ್ಕಾಂ) ವ್ಯಾಪ್ತಿಗೆ ಬರುವ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಉಪವಿಭಾಗ ಹಾಗೂ ಶಾಖಾ ಕಚೇರಿ ಮಟ್ಟದಲ್ಲಿ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ವಿವಿಧ ವರ್ಗಗಳ ಸದಸ್ಯರನ್ನೊಳಗೊಂಡ 'ಗ್ರಾಹಕರ ಸಲಹಾ ಸಮಿತಿ'ಯನ್ನು ರಚಿಸಲಾಗಿದ್ದು, ಈ ಸಮಿತಿಯ ಅಲ್ಪ ಸಂಖ್ಯಾತ ಪ್ರತಿನಿಧಿಯಾಗಿ ಅಮ್ಮುಂಜೆ ಗ್ರಾಮದ ಕಲಾಯಿ ಹೊಸನಗರ ನಿವಾಸಿ ಎ ಎಚ್ ಅಬ್ದುಲ್ ಸಲಾಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ವಿದ್ಯುತ್ ಗ್ರಾಹಕರ ಅಹವಾಲುಗಳನ್ನು ಆಲಿಸಿ, ಇಲಾಖೆ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸ
ಮಾಡುವ ಜವಾಬ್ದಾರಿ ಇನ್ನು ಮುಂದೆ ಇವರ ಮೇಲಿರಲಿದೆ. ಈ ನೇಮಕಾತಿಯು ಸ್ಥಳೀಯ ಮಟ್ಟದ ವಿದ್ಯುತ್ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಸಹಕಾರಿಯಾಗಲಿದೆ.















