ಬಂಟ್ವಾಳ: ದ. ಕ. ಜಿ. ಪಂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬಂಟ್ವಾಳ, ತಾಲೂಕು ಆಡಳಿತ ಬಂಟ್ವಾಳ, ಎ.ಜೆ ವೈದ್ಯಕೀಯ ಕಾಲೇಜು ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳವು ಎ.21ರಂದು ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆರೋಗ್ಯ ಮೇಳದಲ್ಲಿ ಎಲ್ಲಾ ಖಾಯಿಲೆಗಳಿಗೆ ಉಚಿತ ವೈದ್ಯಕೀಯ ತಪಾಸಣೆ,ಉಚಿತ ಔಷಧಿ ವಿತರಣೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವಿಕೆ ಹಾಗೂ ಆರೋಗ್ಯ ಮಾಹಿತಿ ಮತ್ತು ಶಿಕ್ಷಣ, ಅಗತ್ಯವಿರುವವರಿಗೆ ಪ್ರಯೋಗಾಲಯದ ತಪಾಸಣೆಗಳು ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಎಲುಬು,ಕೀಲು ,ಚರ್ಮ-ಲೈಂಗಿಕ, ಕಿವಿ, ಮೂಗು, ಗಂಟಲು ತಜ್ಞರು ಕಣ್ಣ,ದಂತ ಪರೀಕ್ಷೆ ಹಾಗೂ ವೈದ್ಯಕೀಯ ತಜ್ಞರು, ಶಸ್ತ್ರ ಚಿಕಿತ್ಸಕರು, ಮಕ್ಕಳ , ಸ್ತ್ರೀರೋಗ ತಜ್ಞರು ಹೆಚ್.ಐ.ವಿ. ಆಪ್ತ ಸಮಾಲೋಚನೆ, ಆಯುಷ್ ಕ್ಲಿನಿಕ್ ಆಯುರ್ವೇದಿಕ್ ಸಿದ್ಧ, ಹೋಮಿಯೋಪತಿ ಅಸಾಂಕ್ರಾಮಿಕ ರೋಗ
ತಪಾಸಣೆ (ಎನ್.ಸಿ.ಡಿ. ಕ್ಲಿನಿಕ್) ಯುನಾನಿ ಔಷಧಿ ಕ್ಲಿನಿಕ್ ಆಪ್ತ ಸಮಲೋಚನೆ (ಹದಿಹರೆಯದ ಮಕ್ಕಳಿಗೆ) ಪೌಷ್ಠಿಕ ಆಹಾರ ತಯಾರಿ ಪ್ರಾತ್ಯಕ್ಷಿಕತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸುವಿಕೆ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಸೌಲಭ್ಯಗಳ ಮಾಹಿತಿ ಕೋವಿಡ್-19 ಲಸಿಕಾಕರಣ ಕ್ಷಯರೋಗ, ಮಲೇರಿಯಾ, ಹೀಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸ್ಥಳದಲ್ಲೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಕೊಡ ಲಾಗುವುದು,ಆರೋಗ್ಯ ಮೇಳಕ್ಕೆ ಅಗಮಿಸುವ ಸಾರ್ವಜನಿಕರು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಆರೋಗ್ಯಾಧಿಕಾರಿ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.














