Coastal Bulletin

ಮಂಗಳೂರಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಭಾಗವಾದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಾಗೂ ಐಇಇಇ ವಿದ್ಯಾರ್ಥಿ ಘಟಕದ ಸಹಭಾಗಿತ್ವದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೈಕ್ರೋಸಾಫ್ಟ್ ತಂತ್ರಾಂಶಗಳ ಬಗೆಗಿನ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

ನಲವತ್ತೊಂಭತ್ತು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಕೆನರಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯುನ್ಮಾನ ಮತ್ತು ಸಂಪರ್ಕ ವಿಭಾಗದ ಉಪನ್ಯಾಸಕರಾದ ಅಜಯ್ ಬೋಳಾರ್, ವಾಯುಸುತ ಹಾಗೂ ಯಾಂತ್ರಿಕ ಅಭಿಯಂತರ ವಿಭಾಗದ ಉಪನ್ಯಾಸಕರಾದ ನಾರಾಯಣ ಸ್ವಾಮಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರವನ್ನು ನಿರ್ವಹಿಸಿದರು.

ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ವೈಷ್ಣವಿ ನಾಯಕ್ ಕಾರ್ಯಾಗಾರವನ್ನು ಸಂಯೋಜಿಸಿದರು.


ವಾಗ್ದೇವಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯಾಗಾರವನ್ನು ನಡೆಸಲು ಅನುಮತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Leave a Comment