ಬಡಗುಂಡಿ:ಗಂಡ–ಹೆಂಡತಿಯ ಮೃತದೇಹ ಪತ್ತೆ.ಪ್ರಕರಣ ದಾಖಲು.

Coastal Bulletin
ಬಡಗುಂಡಿ:ಗಂಡ–ಹೆಂಡತಿಯ ಮೃತದೇಹ ಪತ್ತೆ.ಪ್ರಕರಣ ದಾಖಲು.

ಬಂಟ್ವಾಳ:ಗಂಡ–ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಹೃದಯ ವಿದ್ರಾವಕ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.

ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ಬು ಪೋಲೀಸರು ವ್ಯಕ್ತಪಡಿಸಿದ್ದಾರೆ.ಪತ್ನಿಯ ಕುತ್ತಿಗೆ ಹಿಸುಕಿದ

ರೀತಿಯಲ್ಲಿ ಕಂಡುಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಜಯಂತಿ ಅವರು ಗರ್ಭಿಣಿ ಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಟುಂಬ ವರ್ಗವನ್ನು ದುಖಃತಪ್ತಗೊಳಿಸಿದೆ.

ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Comment