ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ.

Coastal Bulletin
ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ.

ಬಂಟ್ವಾಳ :ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಆ 11ರಂದು ಪಾಣೆಮಂಗಳೂರು ಗ್ರಾಮದ ಬೊಂಡಾಲ ಅಂತರ ಗುತ್ತು ಚಾವಡಿಯ ಹತ್ತಿರದ ಗದ್ದೆಯಲ್ಲಿ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಶ್ರೀಧರ ಶೆಟ್ಟಿ ಬೊಂಡಾಲ ಅಂತರ ಗುತ್ತು ಇವರು ಉದ್ಘಾಟಿಸಿದರು, ಅತಿಥಿಗಳಾಗಿ ಕೆ ಮಹಾಬಲ ಶೆಟ್ಟಿ ಕಕ್ಕೆ ಮಜಲು, ಶರತ್ ಶೆಟ್ಟಿ ಕಕ್ಕೆ ಮಜಲು, ಪ್ರತಿಭಾ ರೈ, ವೇದಿಕೆಯಲ್ಲಿದ್ದರು. ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷ ರಾದ ಕೆ ಪದ್ಮನಾಭ ರೈ ಅವರು ಅಧ್ಯಕ್ಷತೆ ವಹಿಸಿದ್ದರು.

ನಂತರ ವಿವಿಧ ಸ್ಪರ್ಧೆಗಳು ವಲಯದ ಸದಸ್ಯರಿಗೆ ನಡೆಯಿತು. ಸಂಜೆ ಸಮಾರೋಪ ಸಮಾರಂಭದಲ್ಲಿ ಮುಖ್ಯ

ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಕಾರ್ಯದರ್ಶಿ ಜಗನ್ನಾಥ ಚೌಟ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಜತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ರಮಾ ಎಸ್ ಭಂಡಾರಿ, ಯುವ ವಿಭಾಗದ ಅಧ್ಯಕ್ಷರಾದ ನಿಶಾನ್ ಆಳ್ವ, ಉದ್ಯಮಿಗಳಾದ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಸಂತೋಷ್ ಶೆಟ್ಟಿ ಅರೆಬೆಟ್ಟು, ಸಂದೇಶ್ ಶೆಟ್ಟಿ ಅರೆಬೆಟ್ಟು, ಶಶಿಧರ ಮಾರ್ಲ ಬೊಂಡಾಲ, ವಿವಿಧ ವಲಯಗಳ ಅಧ್ಯಕ್ಷರುಗಳು ಭಾಗವಹಿಸಿದರು.

Leave a Comment