ಬಂಟ್ವಾಳ :ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ತಾಂಬೂಲ ಪ್ರಶ್ನಾಚಿಂತನೆ ಕಾರ್ಯಕ್ರಮ ಸೋಮವಾರ ನಡೆಯಿತು.
ತಂತ್ರಿ ಶ್ರೀಪಾದ ಪಾಂಗಣ್ಣಾಯ, ಬಾಯಾರು ಹಿರಣ್ಯ ವೆಂಕಟೇಶ್ ಭಟ್ , ಪ್ರಸನ್ನ ಮುಳಿಯಾಳ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪ್ರಧಾನ ಅರ್ಚಕ ಸುಂದರ ಹೊಳ್ಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬದನಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ
ಕರೆಂಕಿಜೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಮುಖರಾದ ರಾಜೇಶ್ ಗೋವಿಂದಬೆಟ್ಟು, ಶರತ್ ಕುಮಾರ್ ಕೊಯಿಲ, ಲೋಕೇಶ್ ಕೈತ್ರೋಡಿ, ಆನಂದ ಬುರಾಲ್, ದಿನೇಶ ಸುವರ್ಣ, ಯಶೋಧರ ರೈ ದೇರಾಜೆಗುತ್ತು, ಮೋಹನ್ ಕೆ.ಶ್ರೀಯಾನ್, ಶೇಖರ್ ಅಂಚನ್ ಪಿಲ್ಕಾಜೆಗುತ್ತು, ರಾಮಚಂದ್ರ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.














