Coastal Bulletin

ಬಂಟ್ವಾಳ: ಫರಂಗಿಪೇಟೆ ಹೊರಠಾಣೆ ಬಳಿ ಮಂಗಳವಾರ ರಾತ್ರಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಳಿಕ ಕರ್ತವ್ಯದಲ್ಲಿದ್ದ ಗ್ರಾಮಾಂತರ ಠಾಣೆ ಪೊಲೀಸ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಮೇಲೆ ಟಿಪ್ಪರ್ ಚಲಾಯಿಸಲು ಯತ್ನಿಸಿದ ಘಟನೆ ವರದಿಯಾಗಿದೆ.

ಈ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮಂಗಳೂರು ಕಡೆಯಿಮದ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ತಪಾಸಣೆಗೆ ನಿಲ್ಲಿಸಲು ಸೂಚಿಸಿದಾಗ ಈ ಘಟನೆ ನಡೆದಿದೆ. ಇದೇ ಲಾರಿಯನ್ನು ಹಿಂಬಾಲಿಸಿಕೊಂಡು ಕಾರಿನಲ್ಲಿ

ಬಂದಿದ್ದ ತಂಡವೊಂದು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೇಣುಗೋಪಾಲ್ ಮತ್ತು ಹೋಮ್ ಗಾರ್ಡ್ ಗೆ ಅವಾಚ್ಯವಾಗಿ ನಿಂದಿಸಿ ಪರಾರಿಯಾಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Comment