ಬಂಟ್ವಾಳ: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನವು ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದು, ಪ್ರತಿಷ್ಠಾನದ ಜನಪರ ಕಾಳಜಿ ಹಾಗೂ ಮಾನವೀಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ‘ಮಂಗಳೂರು ದಸರಾ ಗೌರವ–2026’ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ಸೇವಾಂಜಲಿ ಪ್ರತಿಷ್ಠಾನವು ನಿರಂತರ ಉಚಿತ ಆರೋಗ್ಯ ಸೇವೆ, ರಕ್ತದಾನ ಶಿಬಿರಗಳ ಆಯೋಜನೆ, ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ಗಳ ವಿತರಣೆ ಹಾಗೂ ಅಶಕ್ತರಿಗೆ ನೆರವು ನೀಡುವ ಮೂಲಕ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ.
ಶಿಕ್ಷಣ ಕ್ಷೇತ್ರದಲ್ಲಿಯೂ ವಿಶೇಷ ಕಾಳಜಿ ವಹಿಸಿರುವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ಅವರ ಶಿಕ್ಷಣಕ್ಕೆ ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದರೊಂದಿಗೆ ಧಾರ್ಮಿಕ ಆಚರಣೆ ಹಾಗೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾಮಾಜಿಕ ಮತ್ತು
ಧಾರ್ಮಿಕ ಕ್ಷೇತ್ರಗಳಲ್ಲಿಯೂ ತನ್ನ ಕೊಡುಗೆ ನೀಡುತ್ತಿದೆ.
ಆರೋಗ್ಯ, ಶಿಕ್ಷಣ, ಮಾನವೀಯ ನೆರವು ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ, ತರಬೇತಿ ಕಾರ್ಯಾಗಾರ ಹೀಗೆ ಹತ್ತು ಹಲವು ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸೇವಾಂಜಲಿ ಪ್ರತಿಷ್ಠಾನದ ಕಾರ್ಯಗಳಿಗೆ ಸಂದಿರುವ ಈ ಗೌರವವು ಮತ್ತಷ್ಟು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೇರಣೆಯಾಗಿದೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ. 18ರಂದು ನಡೆದ ನವರಾತ್ರಿ ಕಾರ್ಯಕ್ರಮದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಪ್ರಶಸ್ತಿ ಗೌರವ ಪುರಸ್ಕಾರ ಸ್ವೀಕರಿಸಿದರು.













