ಕಾವಳಕಟ್ಟೆ: ಕಾರು ಹಾಗೂ ಸ್ಕೂಟರ್ ನಡುವೆ ಬೀಕರ ಅಪಘಾತ:ವಿದ್ಯಾರ್ಥಿನಿ ಸಾವು, ಓರ್ವ ಗಂಭೀರ

Coastal Bulletin
ಕಾವಳಕಟ್ಟೆ: ಕಾರು ಹಾಗೂ ಸ್ಕೂಟರ್ ನಡುವೆ ಬೀಕರ ಅಪಘಾತ:ವಿದ್ಯಾರ್ಥಿನಿ ಸಾವು, ಓರ್ವ ಗಂಭೀರ

ಬಂಟ್ವಾಳ: ಕಾವಳಕಟ್ಟೆ ಎನ್.ಸಿ‌.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಬೀಕರ ಅಪಘಾತದಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು, ಇನ್ನೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಡಬ ನಿವಾಸಿ ಅನನ್ಯ (21)ಎಂಬವರು ಸ್ಥಳದಲ್ಲಿ ಮೃತಪಟ್ಟರೆ, ಬೆಳ್ತಂಗಡಿ ನಿವಾಸಿ ಪೃಥ್ವಿ ರಾವ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ.

   ಎನ್.ಸಿ.ರೋಡ್ ತಿರುವು ಆಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ.

   ಇಬ್ಬರೂ

‌ಕೂಡ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಾಗಿದ್ದು ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಎನ್.ಸಿ.ರೋಡ್ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ‌ ಆಕ್ಟೀವ್ ಮಧ್ಯೆ ಅಪಘಾತ ಸಂಭವಿಸಿದೆ.

‌‌‌‌ ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ರಾಜೇಶ್ ಕೆ.ವಿ. ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Comment