ಬಂಟ್ವಾಳ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಅಧಿಕೃತ ನಿವಾಸ ‘ಗಂಗಾ’ದ ಗೃಹಪ್ರವೇಶ ಸಮಾರಂಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಪಾಲ್ಗೊಂಡು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನೂತನ ನಿವಾಸದಲ್ಲಿ ಶುಭ ಕಾರ್ಯಗಳು ನಿರಂತರವಾಗಿ ನಡೆಯಲಿ ಹಾಗೂ ರಾಜ್ಯದ ಜನತೆಯ ಸೇವೆಗೆ ಮತ್ತಷ್ಟು ಶಕ್ತಿ ಮತ್ತು ಯಶಸ್ಸು ದೊರೆಯಲಿ ಎಂದು ಹಾರೈಸಿದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಪಕ್ಷದ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಶಬೀರ್ ಎಸ್. ಸೇರಿದಂತೆ ಹಲವು ಗಣ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.










