Coastal Bulletin

ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು.

ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯದರ್ಶಿ ಭುವನೇಶ್

ಗೇರುಕಟ್ಟೆ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು, ಪ್ರಧಾನ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ , ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಉಪಸ್ಥಿತರಿದ್ದರು.

Leave a Comment