ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ವತಿಯಿಂದ ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆ ಸಮಾರಂಭವು ತಾಲೂಕು ಪಂಚಾಯತ್ ನ SGSY ಸಭಾಂಗಣದಲ್ಲಿ ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ ರೈ ರವರು ಬಿಡುಗಡೆ ಮಾಡಿ, ನಂತರ ಮಾತನಾಡಿ ಪಂಚ ಗ್ಯಾರಂಟಿ ಯೋಜನೆ ರಾಜ್ಯಕ್ಕೆ ಮಾದರಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ರವರು ವಹಿಸಿದ್ದರು ಸಮಿತಿಯ ಸದಸ್ಯ ಕಾರ್ಯದರ್ಶಿಯವರಾದ ಸಚಿನ್ ಕುಮಾರ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣ
ನಾಯ್ಕ್, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್,ಪುರಸಭಾ ಅಧ್ಯಕ್ಷರಾದ ವಾಸು ಪೂಜಾರಿ ಲೊರೆಟ್ಟೊ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಅಬ್ಬಸ್ ಆಲಿ,ಚಂದ್ರಶೇಖರ್ ಭಂಡಾರಿ,ಬಾಲಕೃಷ್ಣ ಅಂಚನ್,ಸದಾಶಿವ ಬಂಗೇರ,ಪಂಚ ಗ್ಯಾರಂಟಿ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥರಿದ್ದರು.














