ಮಂಗಳೂರು: 14 ವರ್ಷದ ಹಿಂದಿನ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ ಬಾಂಬ್ ಸ್ಪೋಟದ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳಿಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು ಎಂದು ತಿಳಿದುಬಂದಿದೆ.
ಆರೋಪಿಗಳಾದ ಮೊಹಮ್ಮದ್ ನೌಷಾದ್ ಮತ್ತು ಅಹಮದ್ ಜಾವಾ ಸದ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ.ನೌಷಾದ್ ಮಂಗಳೂರಿನ ಸುಭಾಷ್ ನಗರದಲ್ಲಿ ವಾಸಿಸುತ್ತಿದ್ದ ಇವನ ಮನೆಯನ್ನು ಇಂಡಿಯನ್
ಮುಜಾಹಿದೀನ್ ಉಗ್ರರ ಸಮಲೋಚನೆಯ ತಾಣವಾಗಿ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ 38 ಮಂದಿಗೆ ಮರಣದಂಡನೆ 11 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.














