Coastal Bulletin

ಕಡಬ: ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕುಟುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಈ ದುರ್ಘಟನೆ ಫೆ.20ರ ಬೆಳಿಗ್ಗೆ 6.30 ಸುಮಾರಿಗೆ ಗೆ ನಡೆದಿದೆ.

ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ರೈ ನೈಲ (27) ಎಂಬವರು ಮನೆಯಿಂದ ಸೊಸೈಟಿಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ.

ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ (57) ಎಂಬವರು ರಕ್ಷಣೆಗೆ ಆಗಮಿಸಿದ್ದು ಅವರ ಮೇಲೂ ಆನೆ ದಾಳಿ ನಡೆಸಿದ್ದು, ಆನೆಯ ಅಟ್ಟಹಾಸಕ್ಕೆ ರಮೇಶ್ ರೈ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ

ಮನೆ ಸಮೀಪ ಆಕೆಯ ಮೇಲೆ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ವೇಳೆ ಅಲ್ಲಿಗೆ ರಕ್ಷಿಸಲು ಬಂದ ರಮೇಶ್ ಎಂಬವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡಾನೆಗಳ ಹಾವಳಿ ಮುಂದುವರಿದಿದೆ.

Leave a Comment