ಪೆರ್ಮಂಕಿ: ಫೆ.24ರಂದು ಪ್ರೀತಿ ಗೇಮ್ಸ್ ಕ್ಲಬ್ (ರಿ )ಇದರ 41ನೇ ವಾರ್ಷಿಕೋತ್ಸವ. ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Coastal Bulletin
ಪೆರ್ಮಂಕಿ: ಫೆ.24ರಂದು ಪ್ರೀತಿ ಗೇಮ್ಸ್ ಕ್ಲಬ್ (ರಿ )ಇದರ 41ನೇ ವಾರ್ಷಿಕೋತ್ಸವ. ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ :ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್ (ರಿ.) ಉಳಾಯಿಬೆಟ್ಟು, ಇದರ 41ನೇ ವಾರ್ಷಿಕೋತ್ಸವವದ ಪ್ರಯುಕ್ತ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.24ರಂದು ಶನಿವಾರ ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್ (ರಿ.) ವೇದಿಕೆಯಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ಗಂಟೆ 8-00ಕ್ಕೆ : ಸಂಘದಲ್ಲಿ ಗಣಹೋಮ,10-00ಕ್ಕೆ ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆಮಧ್ಯಾಹ್ನ ಗಂಟೆ 12-00ಕ್ಕೆ ಶ್ರೀ ಸದಾಶಿವ ದೇವರಿಗೆ ಹೂವಿನ ಪೂಜೆ,12-15ಕ್ಕೆ : ಮಹಾಪೂಜೆ ಹಾಗೂ ಪ್ರಸಾದ ವಿತರಣೆ,12-30ಕ್ಕೆ : ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ 

ಸಂಜೆ ಗಂಟೆ 6-00ಕ್ಕೆ : ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್ (ರಿ.) ವೇದಿಕೆಯಲ್ಲಿ ಪೆರ್ಮಂಕಿಯ ಸ್ಥಳೀಯ

ವಿದ್ಯಾರ್ಥಿಗಳಿಂದ ಹಾಗೂ ಪ್ರತಿಭಾವಂತ ಕಲಾವಿದರಿಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ರಾತ್ರಿ ಗಂಟೆ 8-00ರಿಂದ ಸಭಾ ಕಾರ್ಯಕ್ರಮ ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ ನಡೆಯಲಿದೆ ನಂತರ ಅನ್ನಸಂತರ್ಪಣೆ, ರಾತ್ರಿ ಗಂಟೆ 9-00ಕ್ಕೆ ಶಾರದಾ ಆರ್ಟ್ಸ್ ಕಲಾವಿದರು (ರಿ.), ಮಂಜೇಶ್ವರ ಇವರು ಅಭಿನಯಿಸುವ 'ಕಥೆ ಎಡ್ಡೆಂಡು

ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಕ್ಲಬ್ ನ ಪ್ರ. ಕಾರ್ಯದರ್ಶಿ ಶ್ರೀನಾಥ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment