Coastal Bulletin

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ರೂ 800 ಕೋಟಿಗೂ ಮಿಕ್ಕಿ ಅನುದಾನ ಬಂದಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ರೂ 1,500 ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಕ್ಷೇತ್ರದ ಎಲ್ಲಾ ಗ್ರಾಮೀಣ ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡುವುದಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ಅರಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಿಕಳ ಎಂಬಲ್ಲಿ ರೂ 2.20ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮ, ಸದಸ್ಯರಾದ ನಳಿನಿ, ಪ್ರಸನ್ನಕುಮಾರ್ ಶೆಟ್ಟಿ, ದೇವಕಿ, ದೇಜಪ್ಪ ಪೂಜಾರಿ ಚಂದ್ರಹಾಸ ಪೂಜಾರಿ, ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನ ಜಿ.ಕೆ.ಭಟ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಬಿ. ಅರಳ, ಪ್ರಮುಖರಾದ ರಂಜನ್ ಕುಮಾರ್ ಶೆಟ್ಟಿ,  ರವಿ ಅರಸ, ಚಂದ್ರಶೇಖರ್ ಶೆಟ್ಟಿ, ಸುಕುಮಾರ್, ಉಮೇಶ್ ಡಿ.ಎಂ.ಅರಳ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ, ರಮಾನಾಥ ರಾಯಿ,  ಪಿಡಿಒ ಧರ್ಮರಾಜ್ ಇದ್ದರು. 

ಇದೇ ವೇಳೆ ಬಹುಕಾಲದ ಬೇಡಿಕೆಯಾದ ಸಂಗಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಪೆ ಎಂಬಲ್ಲಿ ರೂ 6.67 ಕೋಟಿ

ವೆಚ್ಚದಲ್ಲಿ ಕರ್ಪೆ-ಮುದ್ದಾಜೆ, ಮಾನಡ್ಕ, ದೈಲ-ರಾಯಿ ಸಂಪರ್ಕಿಸುವ ರಸ್ತೆ ಮತ್ತು ಸೇತುವೆ ನಿರ್ಮಾಣದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಮಾಜಿ ಸದಸ್ಯೆ ರೇವತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ, ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಮುಖರಾದ ರತ್ನಕುಮಾರ್ ಚೌಟ, ಸಂದೇಶ ಶೆಟ್ಟಿ ಪೊಡುಂಬ, ಸಂತೋಷ್ ರಾಯಿ ಬೆಟ್ಟು, ಹರೀಶ್ ಆಚಾರ್ಯ ರಾಯಿ, ಪಿಡಿಒ ಪದ್ಮನಾಯ್ಕ್, ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಭಾಕರ್, ಎಂಜಿನಿಯರ್ ಪ್ರಸನ್ನ ಕುಮಾರ್ ಮತ್ತಿತರರು ಇದ್ದರು.

ಕಡೇಶ್ವಾಲ್ಯ ಗ್ರಾಮದಲ್ಲಿ ರೂ 1.13 ಕೋಟಿ ವೆಚ್ಚದ ಪೆರ್ಲಾಪು-ಕೊರತಿಗುರಿ-ಬಾವ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬನಾರಿ ಮತ್ತಿತರರು ಜೊತೆಗಿದ್ದರು.

Leave a Comment