Coastal Bulletin

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಅಲ್ಲದೆ, ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು.

ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.

ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ

ರೈ ಗೆದ್ದು ಬರಬೇಕು ಎಂದು ಜನಾರ್ಧನ ಪೂಜಾರಿ ಈ ಸಂದರ್ಭ ಅಭಿಪ್ರಾಯಪಟ್ಟರು. ಅಲ್ಲದೆ, ಈ ಚುನಾವಣೆಯಲ್ಲಿ ರಮಾನಾಥ ರೈ ಮತ್ತೊಮ್ಮೆ ಗೆದ್ದುಬರಲಿ ಎಂದು ಹಾರೈಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

Leave a Comment